ರಾಷ್ಟ್ರಕವಿ ಗೋವಿಂದ ಪೈ

ವ್ಯಕ್ತಿ ಪರಿಚಯ - 0 Comment
Issue Date : 23.03.2014

ರಾಷ್ಟ್ರಕವಿ ಗೋವಿಂದ ಪೈಯವರು  ಮಂಗಳೂರಿನಲ್ಲಿ ಮಾರ್ಚ್ 23, 1883ರಂದು  ಜನಿಸಿದರು. ಇವರ ತಾಯಿಯ ಮನೆ ಮಂಜೇಶ್ವರ.  ಇವರ ಆರಂಭದ ವ್ಯಾಸಂಗ ಮಂಗಳೂರಿನಲ್ಲಿ (ಗವರ್ನ್ ಮೆಂಟ್ ಕಾಲೇಜು) ನಡೆಯಿತು. ಹೆಚ್ಚಿನ ವ್ಯಾಸಂಗಕ್ಕಾಗಿ ಮದರಾಸಿಗೆ  (ಈಗಿನ ಚೈನ್ಯಗೆ) ತೆರಳಿದರು. ಅದರೆ ತಂದೆಯ ಮರಣದಿಂದಾಗಿ ಪದವಿ ಪಡೆಯದೆ ಮರಳಬೇಕಾಯಿತು. ಆದರೂ ಕೂತಿದ್ದ ಪ್ರಥಮ ಭಾಗ ಇಂಗ್ಲಿಷಿನಲ್ಲಿ ವಿಶ್ವವಿದ್ಯಾನಿಲಯದ   ಸುವರ್ಣ ಪದಕ  ಅವರಿಗೆ ದೊರೆಯಿತು. ಆದರೆ ಅವರ ಸಾಹಿತ್ಯದ ಅಧ್ಯಯನ ಜೀವನ ಪರ್ಯಂತ ನಿರಂತರವಾಗಿ ಮುಂದುವರೆಯಿತು.

ಗೋವಿಂದ ಪೈಯವರು ನಂತರ  ಕೇರಳ  ರಾಜ್ಯದಲ್ಲಿ ಸೇರ್ಪಡೆಯಾದ ಮಂಜೇಶ್ವರದಲ್ಲಿ ನೆಲಸಿದ್ದರಿಂದ ಮಂಜೇಶ್ವರ ಗೋವಿಂದ ಪೈ   ಎಂದೇ ಹೆಸರಾದರು. ಗೋವಿಂದ ಪೈಗಳು ‘ಗಿಳಿವಿಂಡು’, ‘ನಂದಾದೀಪ’ ಎಂಬ ಕಾವ್ಯ ಸಂಕಲನಗಳನ್ನು ಹೊರ ತಂದಿದ್ದಾರೆ. ‘ವೈಶಾಖಿ’ ಹಾಗು ‘ಗೊಲ್ಗೊಥಾ’ ಎನ್ನುವ ಎರಡು ಖಂಡಕಾವ್ಯಗಳನ್ನು ಬರೆದಿದ್ದಾರೆ ‘ಹೆಬ್ಬೆರೆಳು’ ಎನ್ನುವ ಪದ್ಯಗಳನ್ನು ಒಳಗೊಂಡ ಏಕಾಂಕ ನಾಟಕವನ್ನೂ, ‘ಚಿತ್ರಭಾನು’ ಎನ್ನುವ ಗದ್ಯನಾಟಕವನ್ನೂ ಬರೆದಿದ್ದಾರೆ. ‘ತಾಯಿ‘, ‘ಕಾಯಾಯ್ ಕೊಮಾಜಿ’ ಎಂಬ ಸಾಮಾಜಿಕ ನಾಟಕಗಳನ್ನು ಬರೆದದ್ದಲ್ಲದೆ, ಜಪಾನಿನ ನೋ ನಾಟಕಗಳನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ.

ಅವರ ‘ಕನ್ನಡದ ಮೊರೆ’ ಎಂಬ ಸಂಕಲನದಲ್ಲಿ ಅವರು ಬರೆದ ಹಲವು ವ್ಯಕ್ತಿ ಚಿತ್ರಗಳು, ಆತ್ಮ ಕಥನಗಳು ಮತ್ತು ಭಾಷಣಗಳು ಅಡಕವಾಗಿವೆ. ಪ್ರಬಂಧರೂಪದಲ್ಲಿ ಅವರ ‘ಆತ್ಮಕಥನ’ ಮೂಡಿಬಂದಿದೆ. ಲೇಖಕನ ಕಷ್ಟನಿಷ್ಟುರಗಳನ್ನು ವರ್ಣಿಸುವ ‘ಬರಹಗಾರನ ಹಣೆಬರಹ’, ತಮ್ಮ ಗುರುಗಳಾದ ಪಂಜೆಯವರಲ್ಲಿದ್ದ ಪೂಜ್ಯಭಾವದ ಪ್ರತೀಕದಂತಿರುವ ‘ಕನಸಾದ ನನಸು’, ಒಡನಾಡಿಗಳಾದ ಎಂ.ಎನ್. ಕಾಮತ್, ಕಿಲ್ಲೆ ಅವರ ಸ್ನೇಹದ ಬಗ್ಗೆ ಬರೆದಿರುವ ಅವರ ಬರಹಗಳು, ಎಂ.ಆರ. ಶ್ರೀನಿವಾಸ ಮೂರ್ತಿಗಳಿಗೆ ನೆನಪು, ಬೇಂದ್ರೆಯವರಿಗೆ ಐವತ್ತು ದಾಟಿದ್ದಕ್ಕೆ ಸಲ್ಲಿಸಿದ ಹರಕೆ ಇವೆಲ್ಲಾ ಅವರ ಇನ್ನಿತರ ಪ್ರಬಂಧಗಳಾಗಿವೆ.

ಅವರ ‘ಕನ್ನಡದ ಮೊರೆ’ ಎಂಬ ಸಂಕಲನದಲ್ಲಿ ಅವರು ಬರೆದ ಹಲವು ವ್ಯಕ್ತಿ ಚಿತ್ರಗಳು, ಆತ್ಮ ಕಥನಗಳು ಮತ್ತು ಭಾಷಣಗಳು ಅಡಕವಾಗಿವೆ. ಪ್ರಬಂಧರೂಪದಲ್ಲಿ ಅವರ ‘ಆತ್ಮಕಥನ’ ಮೂಡಿಬಂದಿದೆ. ಲೇಖಕನ ಕಷ್ಟನಿಷ್ಟುರಗಳನ್ನು ವರ್ಣಿಸುವ ‘ಬರಹಗಾರನ ಹಣೆಬರಹ’, ತಮ್ಮ ಗುರುಗಳಾದ ಪಂಜೆಯವರಲ್ಲಿದ್ದ ಪೂಜ್ಯಭಾವದ ಪ್ರತೀಕದಂತಿರುವ ‘ಕನಸಾದ ನನಸು’, ಒಡನಾಡಿಗಳಾದ ಎಂ.ಎನ್. ಕಾಮತ್, ಕಿಲ್ಲೆ ಅವರ ಸ್ನೇಹದ ಬಗ್ಗೆ ಬರೆದಿರುವ ಅವರ ಬರಹಗಳು, ಎಂ.ಆರ. ಶ್ರೀನಿವಾಸ ಮೂರ್ತಿಗಳಿಗೆ ನೆನಪು, ಬೇಂದ್ರೆಯವರಿಗೆ ಐವತ್ತು ದಾಟಿದ್ದಕ್ಕೆ ಸಲ್ಲಿಸಿದ ಹರಕೆ ಇವೆಲ್ಲಾ ಅವರ ಇನ್ನಿತರ ಪ್ರಬಂಧಗಳಾಗಿವೆ.

ಸಂಶೋಧನೆ ಗೋವಿಂದ ಪೈಗಳ ಬರೆವಣಿಗೆಯ ಅತಿ ಮುಖ್ಯ ಭಾಗ. ತುಳುನಾಡಿನ ಇತಿಹಾಸ, ಗೌಡ ಸಾರಸ್ವತರ ಮೂಲ, ಬಸವೇಶ್ವರ ವಂಶಾವಳಿ, ಹಾಗು ಕರ್ನಾಟಕದ ಪ್ರಾಚೀನ ರಾಜಮನೆತನಗಳು, ಭಾರತೀಯ ಇತಿಹಾಸ, ಜೈನ, ಬೌದ್ಧ ಹಾಗು ವೀರಶೈವ ಧರ್ಮಗಳ ಬಗೆಗೆ ಮೌಲಿಕ ಸಂಶೋಧನೆ ಮಾಡಿ, ಅನೇಕ ಲೇಖನಗಳನ್ನು ಬರೆದಿದ್ದಾರೆ. ಪಾರ್ಶ್ವನಾಥ ತೀರ್ಥಂಕರ ಚರಿತೆ, ಬಾಹುಬಲಿ ಗೊಮ್ಮಟೇಶ್ವರ ಚರಿತೆ, ಭಗವಾನ್ ಬುದ್ಧ ಮುಂತಾದ ಕೆಲವು ಲೇಖನಗಳನ್ನು ಇಲ್ಲಿ ಹೆಸರಿಸಬಹುದು.

ಯೇಸುವಿನ ಕಡೆಯ ದಿನವನ್ನು ಕುರಿತು ‘ಗೊಲ್ಗೊಥಾ’ ಮತ್ತು ಬುದ್ಧನ ಕಡೆಯ ದಿನವನ್ನು ಕುರಿತ ‘ವೈಶಾಖಿ’ ಎಂಬ ನೀಳ್ಗವಿತೆಗಳಲ್ಲಿ ಅವರ ಸಂಶೋಧನೆಯ ಅಗಾಧತೆಯನ್ನು ಕಾಣಬಹುದಾಗಿದೆ. ‘ಗೊಲ್ಗೊಥಾ’ದ ವಸ್ತುವನ್ನು ಸಂಗ್ರಹಿಸುವಲ್ಲಿ ಮೂಲ ಆಕರಗಳನ್ನು ಎಷ್ಟು ನಿಷ್ಠೆಯಿಂದ ವ್ಯಾಸಂಗ ಮಾಡಿರುವರೆನ್ನುವುದನ್ನು, ‘’ವೈಶಾಖಿ’ಗೆ ಸಂಬಂಧಿಸಿದ ಪಾಳಿಭಾಷೆಯ ಗ್ರಂಥಗಳನ್ನೇ ಅವಲಂಬಿಸಿರುವರೆಂಬುದನ್ನೂ ಅವರು ಕೊಟ್ಟಿರುವ ಟಿಪ್ಪಣಿಗಳಿಂದ ತಿಳಿಯಬಹುದು.

ಗೋವಿಂದ ಪೈ ಸಂಶೋಧನ ಸಂಪುಟ 1995ರ ವರ್ಷದಲ್ಲಿ ಪ್ರಕಟವಾಗಿದೆ.

ಗೋವಿಂದ ಪೈಗಳ ಪತ್ರಗಳನ್ನು ಜಿ.ಪಿ.ರಾಜರತ್ನಂರವರು ‘ ಮಂಜೇಶ್ವರ ಗೋವಿಂದ ಪೈಗಳ ಪತ್ರಗಳು’ ಎನ್ನುವ ಪುಸ್ತಕರೂಪದಲ್ಲಿ ಹೊರತಂದಿದ್ದಾರೆ.

ಗೋವಿಂದ ಪೈಗಳು  ಕೊಂಕಣಿ, ತುಳು,ಕನ್ನಡ, ಸಂಸ್ಕೃತ, ಮಲಯಾಳಂ,ತೆಲುಗು, ತಮಿಳು, ಮರಾಠಿ, ಒರಿಯಾ, ಬಂಗಾಳಿ, ಪಾಲಿ, ಅರ್ಧಮಾಗದಿ, ಉರ್ದು, ಪರ್ಷಿಯನ್, ಗ್ರೀಕ್, ಲ್ಯಾಟಿನ್, ಜಪಾನಿ, ಇತಾಲಿಯನ್ ಸ್ಪಾನಿಷ್, ಪ್ರಾಕೃತ, ಹಿಂದೀ ಹಾಗೂ ಗುಜರಾತಿ ಹೀಗೆ ಹಲವು ಭಾಷೆಗಳ ಪಾಂಡಿತ್ಯವನ್ನು ಪಡೆದಿದ್ದರು.

1946ರಲ್ಲಿ ಮದರಾಸು ಸರಕಾರವು (1956ರಲ್ಲಿ ಕರ್ನಾಟಕ ಏಕೀಕರಣಕ್ಕಿಂತ ಮೊದಲು ದಕ್ಷಿಣ ಕನ್ನಡ ಜಿಲ್ಲೆಯು ಆಗಿನ ಮದರಾಸು ರಾಜ್ಯದಲ್ಲಿ ಅಂದರೆ ಈಗಿನ ತಮಿಳುನಾಡಿನಲ್ಲಿದ್ದಿತು.) ಗೋವಿಂದ ಪೈಗಳಿಗೆ ರಾಷ್ಟ್ರಕವಿ ಎಂದು ಸನ್ಮಾನ ನೀಡಿ ಗೌರವಿಸಿತು.

 1950ರಲ್ಲಿ ಮುಂಬಯಿಯಲ್ಲಿ ಜರುಗಿದ 34ನೆಯ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ  ಗೋವಿಂದ ಪೈಗಳು ಅಧ್ಯಕ್ಷರಾಗಿದ್ದರು.

1962ರ ಸೆಪ್ಟೆಂಬರ್  6  ರಂದು ಗೋವಿಂದ ಪೈಯವರು ನಿಧನ ಹೊಂದಿದರು.

   

Leave a Reply