ಶಾರದಾ ವಿದ್ಯಾಮಂದಿರದ ವಾರ್ಷಿಕೋತ್ಸವ

ಮಂಡ್ಯ - 0 Comment
Issue Date : 29.01.2014

ಮಹದೇವಪುರ: ಭಾರತೀಯ ಸಂಸ್ಕೃತಿಯ ಉಳಿವಿಗೆ ಹೆಚ್ಚು ಒತ್ತು ನೀಡಬೇಕೆಂದು ಸಮಾಜ ಸೇವಕ ಎ.ಎನ್.ಕೃಷ್ಣಮೂರ್ತಿ ತಿಳಿಸಿದರು.

ಕ್ಷೇತ್ರದ ವರ್ತೂರಿನಲ್ಲಿ ಮಂಗಳ ಶಿಕ್ಷಣ ಸಮಿತಿ ಹಾಗೂ ಶಾರದ ವಿದ್ಯಾಮಂದಿರದ 32 ನೇ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಪಾಶ್ಚಿಮಾತ್ಯ ಸಂಸ್ಕೃತಿಯ ಪ್ರಭಾವದಿಂದ ನಮ್ಮ ಸಂಸ್ಕೃತಿ ಅಳಿವಿನ ಅಂಚಿಗೆ ತಲುಪಿದ್ದು, ಯುವ ಪೀಳಿಗೆ ನಮ್ಮ ಸಂಸ್ಕೃತಿಯ ಬೆಳವಣಿಗೆಗೆ ಶ್ರಮಿಸಬೇಕಾಗಿದೆ ಎಂದರು.

ಆದರ್ಶ ವಿದ್ಯಾಸಂಸ್ಥೆಗಳ ಅಧ್ಯಕ್ಷ ವಿ.ಪ್ರೇಮ್‌ರಾಜ್ ಜೈನ್ ಮಾತನಾಡಿ, ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡಿ ಅವರ ಭವಿಷ್ಯವನ್ನು ಉಜ್ವಲಗೊಳಿಸುತ್ತಿರುವ ಶಾರದ ವಿದ್ಯಾಮಂದಿರದ ಕೊಡುಗೆ ಅಪಾರ. 2012-13ರಲ್ಲಿ ಶಾಲೆಯು ನೂರಕ್ಕೆ ನೂರರಷ್ಟು ಫಲಿತಾಂಶ ಪಡೆದಿದ್ದು, ಈ ಶಾಲೆ ಇತರೆ ಶಾಲೆಗಳಿಗೆ ಮಾದರಿಯಾಗಿದೆ ಎಂದು ಶ್ಲಾಘಿಸಿದರು. ಕಳೆದ ಸಾಲಿನಲ್ಲಿ ಉತ್ತಮ ಫಲಿತಾಂಶ ಪಡೆದ ವಿದ್ಯಾರ್ಥಿಗಳಿಗೆ ಇದೇ ಸಂದರ್ಭದಲ್ಲಿ ಬಹುಮಾನ ವಿತರಿಸಲಾಯಿತು. ಪ್ರಾಂಶುಪಾಲ ಡಾ.ಆರ್.ಎಸ್.ಭಾರತೀಶ್ ರಾವ್, ವಿಶ್ವ ಹಿಂದೂ ಪರಿಷತ್ ಜಿಲ್ಲಾಧ್ಯಕ್ಷ ಮುನಿರಾಜು, ಟಿಎಪಿಎಂಸಿ ನಿರ್ದೇಶಕ ಎಸ್.ವಿ.ಗೋಪಾಲ್‌ರೆಡ್ಡಿ, ಮಂಗಳ ಶಿಕ್ಷಣ ಸಮಿತಿ ಕಾರ್ಯದರ್ಶಿ ರಾಘವೇಂದ್ರ, ಕಾಂತಿಲಾಲ್ ರಾಥೋಡ್, ಕೆ.ಜಯಣ್ಣ, ಉಪಾಧ್ಯಾಯ ವೃಂದದವರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

   

Leave a Reply