ರಕ್ಷಾ ಬಂಧನ

ಹಬ್ಬಗಳು - 0 Comment
Issue Date : 10.08.2014

ಭಾರತದಲ್ಲಿ ಶ್ರಾವಣ ಮಾಸದ ಹುಣ್ಣಿಮೆಯನ್ನು ಉಪಾಕರ್ಮ ಎಂದು ಹಿಂದಿನಿಂದ ಆಚರಿಸುತ್ತಿದ್ದಾರೆ.  ಈ ದಿನಕ್ಕೆ ಮತ್ತೊಂದು ವಿಶೇಷವಿದೆ. ಮುಂಚೆ ಉತ್ತರ ಭಾರತದಲ್ಲಿ ಮಾತ್ರ ಹೆಚ್ಚು ಪ್ರಚಲಿತವಿದ್ದ ‘ರಕ್ಷಾಬಂಧನ’ ಅಥವಾ ‘ರಾಖಿ’ ಹಬ್ಬವನ್ನು ಇತ್ತೀಚಿನ ವರ್ಷಗಳಲ್ಲಿ ಭಾರತದಾದ್ಯಂತ ಎಲ್ಲರೂ ಆಚರಿಸುತ್ತಾರೆ. ರಕ್ಷಾ ಬಂಧನ ಆಚರಣೆಗೆ ಭಾರತೀಯ ಸಂಸ್ಕೃತಿಯಲ್ಲಿ ತನ್ನದೇ ಆದ ಮಹತ್ವವಿದೆ.

ತನ್ನ ಸೋದರನ ಅಭಿವೃದ್ಧಿಗೆ, ನೆಮ್ಮದಿಗೆ ಹಾರೈಸುವ ಅಕ್ಕ- ತಂಗಿಯರು ತಮ್ಮ ಅಣ್ಣತಮ್ಮಂದಿರಿಗೆ ರಾಖಿ ಕಟ್ಟಿ, ಸಿಹಿ ವಿನಿಮಯ ಮಾಡಿಕೊಂಡು, ಉಡುಗೊರೆ ಪಡೆದು ಸಂತಸಪಡುವ  ಹಬ್ಬ  ರಕ್ಷಾ ಬಂಧನ. ಪ್ರತಿಯೊಬ್ಬ ಸಹೋದರಿಯು ಸಮಾಜದ ದುಷ್ಟಶಕ್ತಿಗಳಿಂದ ರಕ್ಷಿಸೆಂದು ತನ್ನ ಸಹೋದರನ ಮುಂಗೈಗೆ ರಾಖಿಯನ್ನು ಕಟ್ಟುತ್ತಾಳೆ. ಪ್ರತಿಯೊಬ್ಬ ಸಹೋದರನೂ ಈ ಸಮಯದಲ್ಲಿ ಸಹೋದರಿಯೆಡೆಗೆ ತನ್ನ ಭ್ರಾತೃತ್ವ ಪ್ರೇಮವನ್ನು ಉಜ್ವಲಗೊಳಿಸಬೇಕೆಂಬುದು ರಕ್ಷಾಬಂಧನ ಹಬ್ಬದ ನೀತಿಯಾಗಿದೆ.

ಇದೇ ದಿನ ಬ್ರಾಹ್ಮಣರು ಇದನ್ನು ಋಗ್ವೇದ ಉಪಾಕರ್ಮವೆಂದು ಜನಿವಾರವನ್ನು ಬದಲಿಸಿ ಹೊಸ ಜನಿವಾರವನ್ನು ಹಾಕಿಕೊಂಡು ನಡೆಸಿಕೊಂಡು ಬರುವ ಪದ್ಧತಿ.

 

   

Leave a Reply