ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಸೇವೆ ಅಳವಡಿಸಿಕೊಳ್ಳಲಿ: ಸಿದ್ದಯ್ಯ

ಚಾಮರಾಜನಗರ - 0 Comment
Issue Date : 06.12.2013


ಚಾಮರಾಜನಗರ: ವಿದ್ಯಾರ್ಥಿಗಳು ಸೇವೆಯನ್ನು ಜೀವನದ ಒಂದು ಭಾಗವನ್ನಾಗಿ ಅಳವಡಿಸಿಕೊಳ್ಳಬೇಕು ಎಂದು ಬೆಂಗಳೂರಿನ ಬಿ.ಬಿ.ಎಂ.ಪಿ ನಿವೃತ್ತ ಆಯುಕ್ತ ಸಿದ್ದಯ್ಯ ಅವರು ಹೇಳಿದರು.
ಅವರು ನಗರದ ಸರ್ವಪಲ್ಲಿ ರಾಧಾಕೃಷ್ಣ ರಸ್ತೆಯಲ್ಲಿರುವ ಸೇವಾಭಾರತಿ ಕಾಲೇಜು ಆವರಣದಲ್ಲಿ ಏರ್ಪಡಿಸಲಾಗಿದ್ದ ವಾರ್ಷಿಕೋತ್ಸವ ಸಮಾರಂಭ ವಿವೇಕ-2013 ಕಾರ್ಯಕ್ರಮದ ಶಾರೀರಿಕೋತ್ಸವದಲ್ಲಿ ಮುಖ್ಯಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು.
ಸೇವಾಭಾರತಿ ಕಾಲೇಜಿನಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಗ್ರಾಮಾಂತರ ಜನರ ಕಷ್ಟ ಕಾರ್ಪಣ್ಯಗಳೊಂದಿಗೆ ಸ್ಪಂದಿಸಿ ಉತ್ತಮ ಗುಣಮಟ್ಟದ ಶಿಕ್ಷಣ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ ಎಂದರು.
ಇಂದಿನ ಆಧುನಿಕ ಮಾಹಿತಿ ತಂತ್ರಜ್ಞಾನದ ಜೊತೆಗ ರಾಷ್ಟ್ರಪ್ರೇಮ ಕಲಿಯಬೇಕು. ಸಮಾಜಕ್ಕೆ ಇಂದು ಉತ್ತಮ ಶಿಕ್ಷಕರು, ವೈದ್ಯರು, ಎಲ್ಲಕ್ಕಿಂತ ಮಿಗಿಲಾಗಿ ಉತ್ತಮ ರಾಜಕಾರಣಿಗಳ ಅಗತ್ಯವಿದೆ ಎಂದರು.
ವಿದ್ಯಾರ್ಥಿಗಳು ಪಠ್ಯದ ವಿಷಯಗಳನ್ನು ಕಲಿಯುವುದರ ಜೊತೆಗೆ ಉತ್ತಮ ನಾಗರಿಕರಾಗಬೇಕು. ಹಾಗಾದಾಗ ಸದೃಢ ಸಮಾಜ ನಿರ್ಮಾಣವಾಗುತ್ತದೆ. ಈ ನಿಟ್ಟಿನಲ್ಲಿ ಉತ್ತಮ ಶಿಕ್ಷಣ ನೀಡುವ ಜವಾಬ್ದಾರಿ ಪೋಷಕರದಾಗಿರುತ್ತದೆ ಎಂದರು.
ಸೇವಾಭಾರತಿ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಮ.ವೆಂಕಟರಾಮು, ಬೆಂಗಳೂರು ಕೆ.ಪಿ.ಎಸ್.ಸಿ. ಸದಸ್ಯರಾದ ಮಹದೇವು, ಎಸ್ಪಿ ರಾಜೇಂದ್ರ ಪ್ರಸಾದ್ ಸೇರಿದಂತೆ ಸೇವಾಭಾರತಿ ಶಿಕ್ಷಣ ಸಂಸ್ಥೆಯ ಎಲ್ಲಾ ಸದಸ್ಯರು, ಆಡಳಿತ ವರ್ಗದವರು ಭಾಗವಹಿಸಿದ್ದರು.

   

Leave a Reply