ಬೆಂಗಳೂರು: ಉತ್ಥಾನ ಮಾಸಪತ್ರಿಕೆಯು ರಾಜ್ಯ ಮಟ್ಟದ ವಾರ್ಷಿಕ ಕಥಾ ಸ್ಪರ್ಧೆಯನ್ನು ಆಯೋಜಿಸಿದೆ. ಉತ್ಥಾನ ಮಾಸಪತ್ರಿಕೆಯು ಕಳೆದ 6 ದಶಕಗಳಿಂದ ರಾಜ್ಯ ಮಟ್ಟದ ವಾರ್ಷಿಕ ಕಥಾ ಸ್ಪರ್ಧೆಯನ್ನು ಆಯೋಜಿಸುತ್ತಾ ಬಂದಿದೆ. ಈ ಬಾರಿಯ 2026ನೇ ಸಾಲಿನ ಉತ್ಥಾನ ವಾರ್ಷಿಕ ಕಥಾ ಸ್ಪರ್ಧೆಗೆ ಕಥೆಯನ್ನು ಆಹ್ವಾನಿಸಲಾಗಿದೆ.
ಉತ್ಥಾನ ಸಂಪಾದಕ ಅನಿಲ್ ಕುಮಾರ್ ಮೊಳಹಳ್ಳಿ ಅವರು ಪ್ರಕಟಣೆಯಲ್ಲಿ ಈ ವಿಷಯ ತಿಳಿಸಿದ್ದಾರೆ.
ಬಹುಮಾನಗಳು:
ಮೊದಲನೆಯ ಬಹುಮಾನ ರೂ. 15,000
ಎರಡನೆಯ ಬಹುಮಾನ ರೂ. 12,000
ಮೂರನೆಯ ಬಹುಮಾನ ರೂ. 10,000
ಐದು ಮೆಚ್ಚುಗೆಯ ಬಹುಮಾನಗಳು ತಲಾ ರೂ. 2,000
ನಿಯಮಗಳು:
ಕಥೆ 3,000 ಪದಗಳ ಮಿತಿಯಲ್ಲಿ ಇರಬೇಕು.
ಕಥೆಗಳು ಸ್ವತಂತ್ರವಾಗಿರಬೇಕು. ಬೇರೆಲ್ಲೂ ಪ್ರಕಟಣೆ ಅಥವಾ ಸ್ವೀಕೃತವಾಗಿರಬಾರದು.
ಒಬ್ಬರು ಒಂದು ಕಥೆಯನ್ನು ಮಾತ್ರ ಕಳುಹಿಸಬಹುದು.
ಕಥೆಯನ್ನು ಪೋಸ್ಟ್ ಮೂಲಕ ಅಥವಾ ನುಡಿ/ಯೂನಿಕೋಡ್ ತಂತ್ರಾಂಶದಲ್ಲಿ ಸಿದ್ಧಪಡಿಸಿ ಇ-ಮೇಲ್ ಮೂಲಕ ಕಳುಹಿಸಬಹುದು. ಇ-ಮೇಲ್ ವಿಳಾಸ: utthanakathaspardhe@gmail.com
ಲೇಖಕರು ತಮ್ಮ ಹೆಸರು, ವಿಳಾಸ, ಕಿರುಪರಿಚಯ ಮುಂತಾದ ವಿವರಗಳನ್ನು ಕಥೆಯ ಜೊತೆಯಲ್ಲಿ ಬರೆಯದೆ, ಪ್ರತ್ಯೇಕ ಪುಟದಲ್ಲಿ ಬರೆದು ಕಳುಹಿಸಬೇಕು. ಜೊತೆಗೆ ಲೇಖಕರ ಭಾವಚಿತ್ರವೂ ಇರಬೇಕು.
ಸ್ಪರ್ಧೆಗೆ ಸಂಬAಧಿಸಿದ ಎಲ್ಲ ವಿಚಾರಗಳಲ್ಲೂ ವ್ಯವಸ್ಥಾಪಕರದ್ದೇ ಅಂತಿಮ ತೀರ್ಮಾನ.
ಕಥೆಗಳು ತಲುಪಲು ಕೊನೆಯ ದಿನಾಂಕ: ಅಕ್ಟೋಬರ್ 10, 2026
ವಿಳಾಸ: ಸಂಪಾದಕರು, ‘ಉತ್ಥಾನ’ ವಾರ್ಷಿಕ ಕಥಾ ಸ್ಪರ್ಧೆ – 2026, ‘ಕೇಶವ ಶಿಲ್ಪ’, ಕೆಂಪೇಗೌಡನಗರ, ಬೆಂಗಳೂರು- 560 004 ದೂರವಾಣಿ: 77954 41894 ಇ-ಮೇಲ್: utthanakathaspardhe@gmail.com
