ಕಲಬುರಗಿ: ನಗರದ ಪ್ರೇಮ್ ಬಾಕ್ಸ್ ಅನಿಮೇಶನ್ ಸಂಸ್ಥೆಯಲ್ಲಿ ಶಿಕ್ಷಕರ ದಿನಾಚರಣೆಯನ್ನು ಸಡಗರ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮಕ್ಕೆ ಚಾಲನೆ ನೀಡುವ ಮುನ್ನ ಗಿಡಕ್ಕೆ ನೀರುಣಿಸುವ ಮೂಲಕ ಪರಿಸರ ಸಂರಕ್ಷಣೆಯ ಸಂದೇಶ ಸಾರಲಾಯಿತು.
ಸಂಸ್ಥೆಯ ಮುಖ್ಯಸ್ಥರಾದ ಶಾಂತಪ್ರಕಾಶ್ ಕುಲಕರ್ಣಿ ಅವರ ಉಪಸ್ಥಿತಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪ್ರದೀಪಕುಮಾರ್ ಕುಲಕರ್ಣಿ, ಪವನ್ ಕುಲಕರ್ಣಿ ಹಾಗೂ ಕೌನ್ಸಿಲರ್ ಚೈತ್ರಾ ಅವರು ಭಾಗವಹಿಸಿದ್ದರು. ಸಂಸ್ಥೆಯ ಸಹಶಿಕ್ಷಕರಾದ ವೈಭವ ಘನಾಟೆ ಅವರು ಸಹ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟು ಶಿಕ್ಷಕರಿಗೆ ಗೌರವ ಸಲ್ಲಿಸಿದರು. ಅರುಣಾ, ಮೇಹುಲ ಕಾಂಬಳೆ, ಅವಿನಾಶ್, ಸಿದ್ದಲಿಂಗ, ಅವಿನಿಶ್ ಹಾಗೂ ವೀರೇಶ್ ಸೇರಿದಂತೆ ಹಲವು ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಸಹನಾ ಸೋಲಂ ಅವರು ನಿರೂಪಿಸಿದರು. ಸ್ವರೂಪ್ ಹುಡಗಿ ಅವರು ಸ್ವಾಗತಿಸಿದರು ಹಾಗೂ ಘಟನೇಶ್ವರ ಖಾನಾಪೂರೆ ಅವರು ವಂದಿಸಿದರು. ಶಿಕ್ಷಕರ ಜ್ಞಾನ, ಮಾರ್ಗದರ್ಶನ ಹಾಗೂ ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಅವರ ಅಮೂಲ್ಯ ಪಾತ್ರವನ್ನು ಸ್ಮರಿಸಿ, ಶಿಕ್ಷಕರಿಗೆ ಗೌರವ ಸಲ್ಲಿಸುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಚರಿಸಲಾಯಿತು.
ವಿಕ್ರಮ ಓದುಗರ ವಾಟ್ಸಪ್ ಬಳಗಕ್ಕೆ ಸೇರಲು ಈ ಸಂಖ್ಯೆಯನ್ನು ನಿಮ್ಮ ಮೊಬೈಲ್ನಲ್ಲಿ ಸೇವ್ ಮಾಡಿಕೊಂಡು ನಮಗೊಂದು ಸಂದೇಶ ಕಳುಹಿಸಿ. ಮೊಬೈಲ್ ಸಂಖ್ಯೆ: 98800 21122
