ಕಲಬುರಗಿ: ನಗರದ ಹೊರವಲಯದ ಏರ್ಪೋರ್ಟ್ನ ತರಬೇತಿ ವಿಮಾನವೊಂದು ತಾಂತ್ರಿಕ ದೋಷದಿಂದಾಗಿ ಶ್ರೀನಿವಾಸ ಸರಡಗಿ ಗ್ರಾಮದ ಜಮೀನೊಂದರಲ್ಲಿ ಮಂಗಳವಾರ ಸಂಜೆ ತುರ್ತು ಭೂಸ್ಪರ್ಶ ಮಾಡಿದೆ.
ರೆಡ್ಬರ್ಡ್ ಕಂಪನಿಯ ತರಬೇತಿ ವಿಮಾನ ಹಾರಾಟದ ವೇಳೆ ತಾಂತ್ರಿಕ ದೋಷ ಕಂಡುಬಂದಿದ್ದು, ತಕ್ಷಣ ಸಿಬ್ಬಂದಿ ಸಮಯಪ್ರಜ್ಞೆಯಿಂದ ತೊಗರಿ ಬೆಳೆದಿದ್ದ ಜಮೀನಿನಲ್ಲಿ ಸುರಕ್ಷಿತವಾಗಿ ಇಳಿಸಿದ್ದಾರೆ. ಜಮೀನಿನಲ್ಲಿ ಯಾರೂ ಇಲ್ಲದಿದ್ದರಿಂದ ಗಂಭೀರ ಅಪಾಯ ತಪ್ಪಿದಂತಾಗಿದೆ.
ವಿಷಯ ತಿಳಿಯುತ್ತಿದ್ದಂತೆ ಗ್ರಾಮಸ್ಥರು, ಪೊಲೀಸರು ಹಾಗೂ ವಿಮಾನ ನಿಲ್ದಾಣದ ತರಬೇತಿ ವಿಭಾಗದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದರು.
ವಿಶ್ವವಿದ್ಯಾಲಯ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪಿಐ ಚಂದ್ರಶೇಖರ ತಿಗಡಿ ಸೇರಿದಂತೆ ಸಿಬ್ಬಂದಿ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದರು.
ವಿಕ್ರಮ ಓದುಗರ ವಾಟ್ಸಪ್ ಬಳಗಕ್ಕೆ ಸೇರಲು ಈ ಸಂಖ್ಯೆಯನ್ನು ನಿಮ್ಮ ಮೊಬೈಲ್ನಲ್ಲಿ ಸೇವ್ ಮಾಡಿಕೊಂಡು ನಮಗೊಂದು ಸಂದೇಶ ಕಳುಹಿಸಿ. ಮೊಬೈಲ್ ಸಂಖ್ಯೆ: 98800 21122
