ನಾಗಪುರ: ಪ್ರಸಿದ್ಧ ಸಿನಿಮಾ ಹಾಗೂ ರಂಗಭೂಮಿ ಕಲಾವಿದ ಶ್ರೀ ನಾನಾ ಪಾಟೇಕರ್ ಅವರ ನಿಧನಕ್ಕೆ ಇಡೀ ದೇಶದೊಂದಿಗೆ ರಾಷ್ಟ್ರೀಯ ಸ್ವಯಂಸೇವಕ ಸಂಘವು ಆಳವಾದ ಸಂತಾಪ ವ್ಯಕ್ತಪಡಿಸಿದೆ. ದುಃಖಿತ ಕುಟುಂಬದ ಸದಸ್ಯರು ಹಾಗೂ ಅವರ ಅಸಂಖ್ಯಾತ ಅಭಿಮಾನಿಗಳಿಗೆ ಹೃದಯಾಂತರಾಳದ ಸಂತಾಪಗಳನ್ನು ಸಲ್ಲಿಸಿದೆ.
ನಾನಾ ಪಾಟೇಕರ್ ಅವರು ನಟರಾಗಿ ತಮ್ಮದೇ ಆದ ವಿಶಿಷ್ಟ ಸ್ಥಾನವನ್ನು ನಿರ್ಮಿಸಿಕೊಂಡಿದ್ದರು. ತಮ್ಮ ಸುದೀರ್ಘ ಕಲಾ ವೃತ್ತಿಜೀವನದಲ್ಲಿ ಅತ್ಯುತ್ತಮ ಅಭಿನಯದ ಜೊತೆಗೆ, ಸಾಮಾಜಿಕ ಮಹತ್ವ ಹೊಂದಿರುವ ಹಲವು ವಿಷಯಗಳನ್ನು ಸಾರ್ವಜನಿಕ ಚರ್ಚೆಗೆ ತಂದು, ಅವುಗಳ ಕುರಿತು ಸಕಾರಾತ್ಮಕವಾಗಿ ಚರ್ಚಿಸಲು ಜನರನ್ನು ಅವರು ಪ್ರೇರೇಪಿಸಿದ್ದರು.
ನಾನಾ ಪಾಟೇಕರ್ ಅವರ ಅಗಲಿಕೆಗೆ ತೀವ್ರ ಸಂತಾಪ ವ್ಯಕ್ತಪಡಿಸಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಸಂಘಚಾಲಕ ಡಾ. ಮೋಹನ್ ಭಾಗವತ್ ಹಾಗೂ ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ಅವರು, ಅಗಲಿದ ಕಲಾವಿದನ ಆತ್ಮಕ್ಕೆ ಸದ್ಗತಿಯನ್ನು ಕರುಣಿಸಲಿ ಎಂದು ಭಗವಂತನಲ್ಲಿ ಪ್ರಾರ್ಥಿಸಿದ್ದಾರೆ.
ವಿಕ್ರಮ ಓದುಗರ ವಾಟ್ಸಪ್ ಬಳಗಕ್ಕೆ ಸೇರಲು ಈ ಸಂಖ್ಯೆಯನ್ನು ನಿಮ್ಮ ಮೊಬೈಲ್ನಲ್ಲಿ ಸೇವ್ ಮಾಡಿಕೊಂಡು ನಮಗೊಂದು ಸಂದೇಶ ಕಳುಹಿಸಿ. ಮೊಬೈಲ್ ಸಂಖ್ಯೆ: 98800 21122
