ಹುಬ್ಬಳ್ಳಿ: ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣೆ ಹಾಗೂ ನವೀಕರಿಸಬಹುದಾದ ಇಂಧನ ಸಚಿವ ಶ್ರೀ ಪ್ರಲ್ಹಾದ ಜೋಷಿ ಅವರ ಆಪ್ತ ಕಾರ್ಯದರ್ಶಿಯಾದ ಶ್ರೀ ಮುರಳೀಧರ ಮಳಗಿ ಅವರ ತಾಯಿ ಶ್ರೀಮತಿ ರಮಾಬಾಯಿ ಮಳಗಿ (93) ಅವರು ದಿನಾಂಕ 18ರ ಬೆಳಗಿನ ಜಾವ ವಯೋಸಹಜ ಅನಾರೋಗ್ಯದಿಂದ ನಿಧನರಾದರು.
ಮೃತರು 4 ಜನ ಪುತ್ರರು, ಇಬ್ಬರು ಪುತ್ರಿಯರು, ಮೊಮ್ಮಕ್ಕಳು ಸೇರಿದಂತೆ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.
ಗಣ್ಯರ ಸಂತಾಪ:
ಶ್ರೀಮತಿ ರಮಾಬಾಯಿ ಮಳಗಿ ಅವರ ನಿಧನಕ್ಕೆ ಕೇಂದ್ರ ಸಚಿವ ಶ್ರೀ ಪ್ರಲ್ಹಾದ ಜೋಷಿ, ಮಾಜಿ ಮುಖ್ಯಮಂತ್ರಿ ಶ್ರೀ ಜಗದೀಶ್ ಶೆಟ್ಟರ್, ಶಾಸಕರುಗಳಾದ ಶ್ರೀ ಮಹೇಶ್ ಟೆಂಗಿನಕಾಯಿ, ಶ್ರೀ ಎಂ. ಆರ್. ಪಾಟೀಲ್ ಹಾಗೂ ವಿಧಾನ ಪರಿಷತ್ ಸದಸ್ಯ ಶ್ರೀ ಲಿಂಗರಾಜ ಪಾಟೀಲ್ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಅವರ ಕುಟುಂಬದವರಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಗಣ್ಯರು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.
ವಿಕ್ರಮ ಓದುಗರ ವಾಟ್ಸಪ್ ಬಳಗಕ್ಕೆ ಸೇರಲು ಈ ಸಂಖ್ಯೆಯನ್ನು ನಿಮ್ಮ ಮೊಬೈಲ್ನಲ್ಲಿ ಸೇವ್ ಮಾಡಿಕೊಂಡು ನಮಗೊಂದು ಸಂದೇಶ ಕಳುಹಿಸಿ. ಮೊಬೈಲ್ ಸಂಖ್ಯೆ: 98800 21122
