ಐದು ಎಕರೆ ವಿಶಾಲ ನಿವೇಶನದಲ್ಲಿ ತಲೆ ಎತ್ತಲಿದೆ ಆಧುನಿಕ ಕ್ಯಾಂಪಸ್
ಬೀದರ್: ನಗರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ‘ಸರಸ್ವತಿ ಶಿಕ್ಷಣ ವಿಕಾಸ ಸಮಿತಿ’ಯ ನೂತನ ಶಾಲಾ ಕಟ್ಟಡ ನಿರ್ಮಾಣಕ್ಕೆ ಐದು ಎಕರೆಗಳಷ್ಟು ವಿಶಾಲವಾದ ನಿವೇಶನದಲ್ಲಿ ಭೂಮಿಪೂಜೆ ನೆರವೇರಿಸಲಾಯಿತು. ಈ ಮಹತ್ವಾಕಾಂಕ್ಷಿ ಯೋಜನೆಯು ಬೀದರ್ ಜಿಲ್ಲೆಯ ಶಿಕ್ಷಣ ಕ್ಷೇತ್ರಕ್ಕೆ ಮತ್ತೊಂದು ಮೈಲಿಗಲ್ಲಾಗಲಿದ್ದು, ಸ್ಥಳೀಯ ಶಿಕ್ಷಣ ಪ್ರೇಮಿಗಳಿಂದ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.
ರಾಷ್ಟ್ರಮಟ್ಟದ ಶಿಕ್ಷಣ ಸಂಸ್ಥೆಯಾದ ‘ವಿದ್ಯಾ ಭಾರತಿ’ಯ ಮಾರ್ಗದರ್ಶನದಲ್ಲಿ ಕಾರ್ಯನಿರ್ವಹಿಸುತ್ತಿರುವ ಈ ಸಮಿತಿಯು, ಕೇವಲ ಪಠ್ಯಕ್ಕೆ ಸೀಮಿತವಾಗದೆ ಗುಣಮಟ್ಟದ ಶಿಕ್ಷಣದೊಂದಿಗೆ ನೈತಿಕ ಮೌಲ್ಯಗಳು, ಭಾರತೀಯ ಸಂಸ್ಕೃತಿ, ಶಿಸ್ತು ಮತ್ತು ಉನ್ನತ ನೀತಿಗಳನ್ನು ಕಲಿಸುತ್ತಿದೆ. ಆ ಮೂಲಕ ಸಮಾಜಕ್ಕೆ ಜವಾಬ್ದಾರಿಯುತ ನಾಗರಿಕರನ್ನು ರೂಪಿಸುವಲ್ಲಿ ಮಹತ್ವದ ಕೊಡುಗೆ ನೀಡುತ್ತಿದ್ದು, ಇಡೀ ಜಿಲ್ಲೆಗೆ ಹೆಮ್ಮೆಯ ವಿಷಯವಾಗಿದೆ.
ಈ ಸಂಸ್ಥೆಯಲ್ಲಿ ವಿದ್ಯಾಭ್ಯಾಸ ಮಾಡಿದ ಸಾವಿರಾರು ವಿದ್ಯಾರ್ಥಿಗಳು ಇಂದು ದೇಶ-ವಿದೇಶಗಳಲ್ಲಿ ಉನ್ನತ ಸ್ಥಾನಗಳನ್ನು ಅಲಂಕರಿಸುವುದರೊಂದಿಗೆ, ರಾಷ್ಟ್ರ ಮತ್ತು ಸಮಾಜದ ಸೇವೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವುದು ನಿಜಕ್ಕೂ ಹೆಮ್ಮೆಯ ಸಂಗತಿಯಾಗಿದೆ. ಇದೀಗ ಐದು ಎಕರೆ ಪ್ರದೇಶದಲ್ಲಿ ತಲೆ ಎತ್ತಲಿರುವ ನೂತನ ಶಾಲಾ ಆವರಣವು ಮುಂದಿನ ಪೀಳಿಗೆಯ ವಿದ್ಯಾರ್ಥಿಗಳಿಗೆ ಅತ್ಯಾಧುನಿಕ ಸೌಲಭ್ಯಗಳೊಂದಿಗೆ ಉತ್ತಮ ಶೈಕ್ಷಣಿಕ ವಾತಾವರಣ ಕಲ್ಪಿಸಲಿದೆ.
ವಿಕ್ರಮ ಓದುಗರ ವಾಟ್ಸಪ್ ಬಳಗಕ್ಕೆ ಸೇರಲು ಈ ಸಂಖ್ಯೆಯನ್ನು ನಿಮ್ಮ ಮೊಬೈಲ್ನಲ್ಲಿ ಸೇವ್ ಮಾಡಿಕೊಂಡು ನಮಗೊಂದು ಸಂದೇಶ ಕಳುಹಿಸಿ. ಮೊಬೈಲ್ ಸಂಖ್ಯೆ: 98800 21122
