ಬೀದರ್ ಜಿಲ್ಲೆಯ ‘ಸರಸ್ವತಿ ಶಿಕ್ಷಣ ವಿಕಾಸ ಸಮಿತಿ’ಯು, ಗುಣಮಟ್ಟದ ಶಿಕ್ಷಣದೊಂದಿಗೆ ನೈತಿಕ ಮೌಲ್ಯಗಳು, ಸಂಸ್ಕೃತಿ, ಶಿಸ್ತು ಮತ್ತು ನೀತಿಗಳನ್ನು ಕಲಿಸುವ ಮೂಲಕ ಜವಾಬ್ದಾರಿಯುತ ನಾಗರಿಕರನ್ನು ರೂಪಿಸುವಲ್ಲಿ ಮಹತ್ವದ ಕೊಡುಗೆ ನೀಡುತ್ತಿದೆ. ‘ವಿದ್ಯಾ ಭಾರತಿ’ಯ ಮಾರ್ಗದರ್ಶನದಲ್ಲಿ ಕಾರ್ಯನಿರ್ವಹಿಸುತ್ತಿರುವ ಈ ಸಂಸ್ಥೆಯು ಬೀದರ್ ಜಿಲ್ಲೆಗೆ ಹೆಮ್ಮೆಯ ವಿಷಯವಾಗಿದೆ. ಇಲ್ಲಿ ವಿದ್ಯಾಭ್ಯಾಸ ಮಾಡಿದ ಸಾವಿರಾರು ವಿದ್ಯಾರ್ಥಿಗಳು ಇಂದು ರಾಷ್ಟ್ರ ಮತ್ತು ಸಮಾಜದ ಸೇವೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವುದು ನಿಜಕ್ಕೂ ಅತ್ಯಂತ ಹೆಮ್ಮೆಯ ಸಂಗತಿಯಾಗಿದೆ.
ಐದು ಎಕರೆಗಳಷ್ಟು ವಿಶಾಲವಾದ ಜಾಗದಲ್ಲಿ ಹೊಸ ಶಾಲಾ ಆವರಣವನ್ನು ನಿರ್ಮಿಸುತ್ತಿರುವುದು ಸ್ವಾಗತಾರ್ಹ ಬೆಳವಣಿಗೆಯಾಗಿದ್ದು, ಇದು ಬೀದರ್ನ ಶಿಕ್ಷಣ ಕ್ಷೇತ್ರಕ್ಕೆ ನೀಡುವ ಮಹತ್ವದ ಕೊಡುಗೆಯಾಗಲಿದೆ.
ವಿಕ್ರಮ ಓದುಗರ ವಾಟ್ಸಪ್ ಬಳಗಕ್ಕೆ ಸೇರಲು ಈ ಸಂಖ್ಯೆಯನ್ನು ನಿಮ್ಮ ಮೊಬೈಲ್ನಲ್ಲಿ ಸೇವ್ ಮಾಡಿಕೊಂಡು ನಮಗೊಂದು ಸಂದೇಶ ಕಳುಹಿಸಿ. ಮೊಬೈಲ್ ಸಂಖ್ಯೆ: 98800 21122
