ಉಡುಪಿ: ಸಾಮರಸ್ಯ ಗತಿವಿಧಿಯ ಅಖಿಲ ಭಾರತೀಯ ಬೈಠಕ್ ಉಡುಪಿ ಜಿಲ್ಲೆಯ ಚೇರ್ಕಾಡಿಯ ರಾಷ್ಟ್ರೋತ್ಥಾನ ವಿದ್ಯಾ ಕೇಂದ್ರದಲ್ಲಿ ಶನಿವಾರ ನವೆಂಬರ್ 14, 2026ರಂದು ಪ್ರಾರಂಭಗೊಂಡಿತು.
ರಾಷ್ಟ್ರೀಯ ಸ್ವಯಂಸೇವಕ ಸಂಘದ ದಕ್ಷಿಣಮಧ್ಯ ಕ್ಷೇತ್ರೀಯ ಸಂಘಚಾಲಕರಾದ ಡಾ॥ ಪಿ. ವಾಮನ ಶೆಣೈ ಹಾಗೂ ಪೂಜ್ಯ ಬಸವಮೂರ್ತಿ ಮಾದಾರ ಚೆನ್ನಯ್ಯ ಸ್ವಾಮೀಜಿಯವರು ವಿಶೇಷ ಪ್ರದರ್ಶಿನಿಯನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಾಮರಸ್ಯ ಗತಿವಿಧಿಯ ಅಖಿಲ ಭಾರತೀಯ ಸಂಯೋಜಕರಾದ ಶ್ರೀ ಶ್ಯಾಮ್ ಜೀ, ರಾಷ್ಟ್ರೀಯ ಸ್ವಯಂಸೇವಕ ಸಂಘದ ಅಖಿಲ ಭಾರತೀಯ ಸಹಸಂಪರ್ಕ ಪ್ರಮುಖರಾದ ಶ್ರೀ ಸುನೀಲ್ ದೇಶಪಾಂಡೆ ಉಪಸ್ಥಿತರಿದ್ದರು. ಸಾಮರಸ್ಯ ಗತಿವಿಧಿಯ ವಿವಿಧ ಪ್ರಾಂತಗಳ ಕಾರ್ಯಕರ್ತರು ಎರಡು ದಿನಗಳ ಬೈಠಕ್ ನಲ್ಲಿ ಭಾಗವಹಿಸಿದ್ದಾರೆ.
ಪ್ರದರ್ಶಿನಿಯಲ್ಲಿ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಸಾಮರಸ್ಯದ ಕುರಿತು ನಡೆದಿರುವ ವಿವಿಧ ಪ್ರಯೋಗಗಳು ಹಾಗೂ ಚಟುವಟಿಕೆಗಳ ಕುರಿತು ಹಾಗೂ ಸಾಮಾಜಿಕ ಸಾಮರಸ್ಯಕ್ಕೆ ಮಹತ್ವದ ಕೊಡುಗೆ ನೀಡಿದ ಸಾಮಾಜಿಕ ಸುಧಾರಕರಾದ ಕುದ್ಮುಲ್ ರಂಗರಾಯರು ಹಾಗೂ ಪೂಜ್ಯ ನಾರಾಯಣ ಗುರುಗಳ ಜೀವನ ಮತ್ತು ಸಮಾಜ ಸುಧಾರಣಾ ಕಾರ್ಯಗಳನ್ನು ಪರಿಚಯಿಸುವ ಸಾಕ್ಷ್ಯಚಿತ್ರಗಳನ್ನು ಪ್ರದರ್ಶಿಸಲಾಯಿತು.

ವಿಕ್ರಮ ಓದುಗರ ವಾಟ್ಸಪ್ ಬಳಗಕ್ಕೆ ಸೇರಲು ಈ ಸಂಖ್ಯೆಯನ್ನು ನಿಮ್ಮ ಮೊಬೈಲ್ನಲ್ಲಿ ಸೇವ್ ಮಾಡಿಕೊಂಡು ನಮಗೊಂದು ಸಂದೇಶ ಕಳುಹಿಸಿ. ಮೊಬೈಲ್ ಸಂಖ್ಯೆ: 98800 21122
