ಕಲಬುರಗಿ: ಸರಕಾರಿ ಪಾಲಿಟೆಕ್ನಿಕ್ ಕಲಬುರಗಿಯಲ್ಲಿ ಸಂವಿಧಾನ ಅಂಗೀಕಾರ ದಿನವನ್ನು ಆಚರಿಸಲಾಯಿತು. ಕಾರ್ಯಕ್ರಮದ ಅಂಗವಾಗಿ ಕಾಲೇಜಿನ ಪ್ರಾಂಶುಪಾಲರಾದ ಭರತ ದೊಡ್ಡಮನಿ ಅವರು ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು. ಬಳಿಕ ಎಲೆಕ್ಟ್ರಿಕಲ್ ವಿಭಾಗದ ವಿಭಾಗಾಧಿಕಾರಿ ಮಚ್ಛೇಂದ್ರ ಎಸ್.ಬಿ. ಅವರು ಸಂವಿಧಾನದ ಪ್ರಸ್ತಾವನೆಯ ಪ್ರತಿಜ್ಞಾವಿಧಿ ಬೋಧಿಸಿದರು.
ಕಾರ್ಯಕ್ರಮವನ್ನು ಎನ್ಎಸ್ಎಸ್ ಅಧಿಕಾರಿ ಅಮೃತ ಅವರು ನಿರೂಪಿಸಿದರು. ಈ ಸಂದರ್ಭದಲ್ಲಿ ಸಂವಿಧಾನದ ಮಹತ್ವ ಮತ್ತು ಅದರ ಆಶಯಗಳ ಕುರಿತು ವಿದ್ಯಾರ್ಥಿಗಳಿಗೆ ಅರಿವು ಮೂಡಿಸಲಾಯಿತು.
ಕಾರ್ಯಕ್ರಮದಲ್ಲಿ ಎಲ್ಲ ವಿಭಾಗಾಧಿಕಾರಿಗಳು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ವಿಕ್ರಮ ಓದುಗರ ವಾಟ್ಸಪ್ ಬಳಗಕ್ಕೆ ಸೇರಲು ಈ ಸಂಖ್ಯೆಯನ್ನು ನಿಮ್ಮ ಮೊಬೈಲ್ನಲ್ಲಿ ಸೇವ್ ಮಾಡಿಕೊಂಡು ನಮಗೊಂದು ಸಂದೇಶ ಕಳುಹಿಸಿ. ಮೊಬೈಲ್ ಸಂಖ್ಯೆ: 98800 21122
