ಕಲಬುರಗಿ: ಕಲಬುರಗಿಗೆ ಆಗಮಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಜಿಲ್ಲಾ ಬ್ರಾಹ್ಮಣ ಸಂಘ, ಕಲಬುರಗಿ ವತಿಯಿಂದ ಭೇಟಿ ಮಾಡಿ, ದ್ವೈತ ಸಿದ್ಧಾಂತದ ಪ್ರತಿಪಾದಕರಾದ ಶ್ರೀ ಜಗದ್ಗುರು ಮಧ್ವಾಚಾರ್ಯರ ಜಯಂತಿಯನ್ನು ಕರ್ನಾಟಕ ಸರ್ಕಾರದ ವತಿಯಿಂದ ರಾಜ್ಯಮಟ್ಟದಲ್ಲಿ ಅಧಿಕೃತವಾಗಿ ಆಚರಿಸಬೇಕು ಎಂದು ಗೌರವಪೂರ್ವಕವಾಗಿ ಮನವಿ ಸಲ್ಲಿಸಲಾಯಿತು.
ಶ್ರೀ ಜಗದ್ಗುರು ಮಧ್ವಾಚಾರ್ಯರು ಪ್ರತಿಪಾದಿಸಿದ ತತ್ತ್ವಜ್ಞಾನ, ಭಕ್ತಿ, ಧಾರ್ಮಿಕ ಚಿಂತನೆ ಹಾಗೂ ಮಹಾನ್ ಆಧ್ಯಾತ್ಮಿಕ ಪರಂಪರೆಯನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ನಿಟ್ಟಿನಲ್ಲಿ ಸರ್ಕಾರವು ಜಯಂತಿ ಆಚರಣೆಗೆ ಅಧಿಕೃತ ಮಾನ್ಯತೆ ನೀಡಬೇಕೆಂದು ಮನವಿಯಲ್ಲಿ ಕೋರಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಬ್ರಾಹ್ಮಣ ಸಂಘದ ಅಧ್ಯಕ್ಷರಾದ ಪಾಂಡುರಂಗ ದೇಶಮುಖ್, ಪ್ರಶಾಂತ್ ಕೋರಳ್ಳಿ, ಶ್ರೀನಿವಾಸ್ ದೇಸಾಯಿ, ಘಂಟಿ ರಾಮಾಚಾರ್, ಲಕ್ಷ್ಮಣಾಚಾರ್ ಹಾಗೂ ಸಮಾಜದ ಇತರ ಹಿರಿಯ ಮುಖಂಡರು, ಪದಾಧಿಕಾರಿಗಳು ಮತ್ತು ಸಮಾಜ ಬಾಂಧವರು ಉಪಸ್ಥಿತರಿದ್ದರು.
ವಿಕ್ರಮ ಓದುಗರ ವಾಟ್ಸಪ್ ಬಳಗಕ್ಕೆ ಸೇರಲು ಈ ಸಂಖ್ಯೆಯನ್ನು ನಿಮ್ಮ ಮೊಬೈಲ್ನಲ್ಲಿ ಸೇವ್ ಮಾಡಿಕೊಂಡು ನಮಗೊಂದು ಸಂದೇಶ ಕಳುಹಿಸಿ. ಮೊಬೈಲ್ ಸಂಖ್ಯೆ: 98800 21122
