ಕಲಬುರಗಿ: ಮಹಾದಾಸೋಹಿ ಶ್ರೀ ಶರಣಬಸವೇಶ್ವರರ ಪುಣ್ಯಭೂಮಿಯಲ್ಲಿ, ಪವಿತ್ರ ಶ್ರಾವಣ ಮಾಸದ ಕೊನೆಯ ವಾರದ ಅಂಗವಾಗಿ ‘ಸ್ವಾಮಿ ಬಳಗ’ದ ವತಿಯಿಂದ ಪ್ರತಿವರ್ಷದ ಸಂಪ್ರದಾಯದಂತೆ ಈ ಬಾರಿಯೂ ಬೃಹತ್ ಅನ್ನ ಸಮರ್ಪಣೆ (ದಾಸೋಹ) ಕಾರ್ಯಕ್ರಮವನ್ನು ಶ್ರದ್ಧಾ-ಭಕ್ತಿಯಿಂದ ಯಶಸ್ವಿಯಾಗಿ ನೆರವೇರಿಸಲಾಯಿತು.
ದಾಸೋಹ ಸಂಸ್ಕೃತಿಯನ್ನು ಮುಂದುವರಿಸಿಕೊಂಡು ಬರುತ್ತಿರುವ ಸ್ವಾಮಿ ಬಳಗವು ರಥೋತ್ಸವ ಮೈದಾನದಲ್ಲಿ ಸಾರ್ವಜನಿಕರು ಹಾಗೂ ದೇವಸ್ಥಾನಕ್ಕೆ ಆಗಮಿಸಿದ ಭಕ್ತಾದಿಗಳಿಗೆ ಪ್ರಸಾದದ ವ್ಯವಸ್ಥೆ ಕಲ್ಪಿಸಿತ್ತು.
ವಿಕ್ರಮ ಓದುಗರ ವಾಟ್ಸಪ್ ಬಳಗಕ್ಕೆ ಸೇರಲು ಈ ಸಂಖ್ಯೆಯನ್ನು ನಿಮ್ಮ ಮೊಬೈಲ್ನಲ್ಲಿ ಸೇವ್ ಮಾಡಿಕೊಂಡು ನಮಗೊಂದು ಸಂದೇಶ ಕಳುಹಿಸಿ. ಮೊಬೈಲ್ ಸಂಖ್ಯೆ: 98800 21122
