ಕುಲ್ಗಾಂ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಂ ಜಿಲ್ಲೆಯಲ್ಲಿ ನವೆಂಬರ್ 11ರ ಮಧ್ಯಾಹ್ನ ಭದ್ರತಾ ತಪಾಸಣಾ ಕೇಂದ್ರದಲ್ಲಿ ನಿಯೋಜನೆಗೊಂಡಿದ್ದ ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್ಪಿಎಫ್) ಸಿಬ್ಬಂದಿಯ ಮೇಲೆ ಅಪರಿಚಿತ ಬೈಕ್ ಸವಾರರು ಗುಂಡಿನ ದಾಳಿ ನಡೆಸಿದ್ದಾರೆ. ಈ ಘಟನೆಯಲ್ಲಿ ಇಬ್ಬರು ಸಿಆರ್ಪಿಎಫ್ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಸಿಆರ್ಪಿಎಫ್ ಅಧಿಕಾರಿಗಳು ತಿಳಿಸಿದ್ದಾರೆ.
ಮಧ್ಯಾಹ್ನ ಸುಮಾರು 2.15ರ ವೇಳೆಗೆ ಈ ಘಟನೆ ನಡೆದಿದೆ. ಬೈಕ್ನಲ್ಲಿ ಬಂದ ಅಪರಿಚಿತ ದುಷ್ಕರ್ಮಿಗಳು ಕುಲ್ಗಾಂ ಜಿಲ್ಲೆಯ ಭದ್ರತಾ ತಪಾಸಣಾ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಿಆರ್ಪಿಎಫ್ ಸಿಬ್ಬಂದಿಯ ಮೇಲೆ ಗುಂಡು ಹಾರಿಸಿ ಸ್ಥಳದಿಂದ ಪರಾರಿಯಾಗಿದ್ದಾರೆ.
ಗಾಯಗೊಂಡ ಸಿಬ್ಬಂದಿಯನ್ನು ಚಿಕಿತ್ಸೆಗಾಗಿ ಅನಂತನಾಗ್ ಜಿಲ್ಲೆಯ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.
ಸಿಆರ್ಪಿಎಫ್ ಸಿಬ್ಬಂದಿ ಗುರಿ
ಈ ದಾಳಿಯಲ್ಲಿ ಸಿಆರ್ಪಿಎಫ್ನ 46ನೇ ಬೆಟಾಲಿಯನ್ ಸಿಬ್ಬಂದಿಯನ್ನು ಗುರಿಯಾಗಿಸಿಕೊಂಡಿರುವುದಾಗಿ ವರದಿಯಾಗಿದೆ. ಘಟನೆಯ ಬಳಿಕ ಭದ್ರತಾ ಪಡೆಗಳು ಪ್ರದೇಶದಲ್ಲಿ ಕಟ್ಟೆಚ್ಚರ ವಹಿಸಿದ್ದು, ದಾಳಿಕೋರರ ಪತ್ತೆಗಾಗಿ ಕ್ರಮ ಕೈಗೊಂಡಿವೆ.
ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ವಿವರಗಳು ಇನ್ನಷ್ಟೇ ಲಭ್ಯವಾಗಬೇಕಿವೆ.
ವಿಕ್ರಮ ಓದುಗರ ವಾಟ್ಸಪ್ ಬಳಗಕ್ಕೆ ಸೇರಲು ಈ ಸಂಖ್ಯೆಯನ್ನು ನಿಮ್ಮ ಮೊಬೈಲ್ನಲ್ಲಿ ಸೇವ್ ಮಾಡಿಕೊಂಡು ನಮಗೊಂದು ಸಂದೇಶ ಕಳುಹಿಸಿ. ಮೊಬೈಲ್ ಸಂಖ್ಯೆ: 98800 21122
