ಸ್ವಯಂಸೇವಕರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಡಾ. ಮೋಹನ್ ಭಾಗವತ್
ನಾಗ್ಪುರ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್ಎಸ್ಎಸ್) ವಾರ್ಷಿಕ ವಿಜಯದಶಮಿ ಉತ್ಸವವು 2026ರ ಅಕ್ಟೋಬರ್ 20 ರಂದು ನಾಗ್ಪುರದ ರೇಷಿಮ್ಬಾಗ್ನಲ್ಲಿ ನಡೆಯಲಿದೆ. ಕಾರ್ಯಕ್ರಮವು ಬೆಳಿಗ್ಗೆ 7:40 ಕ್ಕೆ ಪ್ರಾರಂಭವಾಗಲಿದೆ.
ಈ ಕಾರ್ಯಕ್ರಮದಲ್ಲಿ ‘ದೈನಿಕ್ ಜಾಗರಣ್’ ಪತ್ರಿಕೆಯ ಮುಖ್ಯ ಸಂಪಾದಕರಾದ ಸಂಜಯ್ ಗುಪ್ತಾ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಹಾಗೂ ಆರ್ಎಸ್ಎಸ್ ಸರಸಂಘಚಾಲಕ ಡಾ. ಮೋಹನ್ ಭಾಗವತ್ ಅವರು ಸ್ವಯಂಸೇವಕರನ್ನು ಉದ್ದೇಶಿಸಿ ವಿಶೇಷ ಉಪನ್ಯಾಸ ನೀಡಲಿದ್ದಾರೆ.
ಆರ್ಎಸ್ಎಸ್ ಸಂಘಟನೆಯಲ್ಲಿ ವಿಜಯದಶಮಿ ಉತ್ಸವವು ಅತ್ಯಂತ ಪ್ರಮುಖವಾದ ವಾರ್ಷಿಕ ಕಾರ್ಯಕ್ರಮವಾಗಿದ್ದು, ಪ್ರತಿವರ್ಷ ಇದನ್ನು ನಾಗ್ಪುರದಲ್ಲಿ ಆಚರಿಸಲಾಗುತ್ತದೆ. ಡಾ. ಕೇಶವ ಬಲಿರಾಮ್ ಹೆಡಗೇವಾರ್ ಅವರು 1925ರ ವಿಜಯದಶಮಿ ದಿನದಂದು ನಾಗ್ಪುರದಲ್ಲಿ ಆರ್ಎಸ್ಎಸ್ ಅನ್ನು ಸ್ಥಾಪಿಸಿದರು. ಅಂದಿನಿಂದ ಪ್ರತಿವರ್ಷ ವಿಜಯದಶಮಿ ಹಬ್ಬದಂದು ಸಂಘವು ತನ್ನ ಸ್ಥಾಪನಾ ದಿನವನ್ನಾಗಿ ಹಾಗೂ ವಿಜಯದಶಮಿ ಉತ್ಸವವನ್ನಾಗಿ ಆಚರಿಸಿಕೊಂಡು ಬರುತ್ತಿದೆ.
ವಿಕ್ರಮ ಓದುಗರ ವಾಟ್ಸಪ್ ಬಳಗಕ್ಕೆ ಸೇರಲು ಈ ಸಂಖ್ಯೆಯನ್ನು ನಿಮ್ಮ ಮೊಬೈಲ್ನಲ್ಲಿ ಸೇವ್ ಮಾಡಿಕೊಂಡು ನಮಗೊಂದು ಸಂದೇಶ ಕಳುಹಿಸಿ. ಮೊಬೈಲ್ ಸಂಖ್ಯೆ: 98800 21122
