ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಸಂವಿಧಾನ ಸಮರ್ಪಣಾ ದಿನಾ ಆಚರಿಸಲಾಯಿತು.
ಈ ವೇಳೆ ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾ ಉಪಾಧ್ಯಕ್ಷ ಬಸವರಾಜ ಪಂಚಾಳ ಅವರು, 2015ರ ಅಕ್ಟೋಬರ್ 11 ರಂದು ಭಾರತದ ಪ್ರಧಾನಿ ನರೇಂದ್ರ ಮೋದಿ ಮುಂಬೈಯಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ಸ್ಮಾರಕಕ್ಕೆ ಅಡಿಗಲ್ಲು ಹಾಕುವ ಸಂದರ್ಭದಲ್ಲಿ ನವೆಂಬರ್ 26 ರಂದು ಸಂವಿಧಾನ ದಿನವನ್ನಾಗಿ ಆಚರಿಸುವಂತೆ ಘೋಷಣೆ ಮಾಡಿದ್ದರು ಎಂದರು.
ಅದರಂತೆ ಪ್ರತಿ ವರ್ಷ ನವೆಂಬರ್ 26 ರಂದು ಸಂವಿಧಾನ ದಿನವನ್ನಾಗಿ ಆಚರಿಸಿಕೊಂಡು ಬರಲಾಗುತ್ತಿದೆ.
ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಸರ್ಕಾರವು ಸಂವಿಧಾನಕ್ಕೆ ನೀಡುತ್ತಿರುವ ಗೌರವ ಹಾಗೂ ಅಂಬೇಡ್ಕರ್ ಅವರ ತತ್ವಗಳನ್ನು ಎತ್ತಿಹಿಡಿಯಲು ಕೈಗೊಂಡಿರುವ ಕ್ರಮಗಳನ್ನು ವಿವರಿಸಿದರು.
ಬಿಜೆಪಿ ಮುಖಂಡ ಆನಂದ ಇಂಗಳಗಿ ಹಾಗೂ ಯುವ ಮೋರ್ಚಾ ಅಧ್ಯಕ್ಷ ಭಾಗಣ್ಣ ದೊರೆ ಅವರು ಮಾತನಾಡಿ,
ನಮ್ಮ ಸಂವಿಧಾನ ದೇಶದ ಜನರನ್ನು ಸಶಕ್ತಗೊಳಿಸಿದೆ. ಸರ್ವರಿಗೂ ಸಮಾನತೆಯೊದಗಿಸಿದೆ. ಮೂಲಭೂತ ಹಕ್ಕುಗಳು, ಕರ್ತವ್ಯವನ್ನೂ ನೀಡಿದೆ
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಂವಿಧಾನದ ಮಹತ್ವವನ್ನು ಅರಿತು ಭಾರತದ ಶ್ರೇಯೋಭಿವೃದ್ದಿಗಾಗಿ ನಾವು ಬದುಕ ಬೇಕಾಗಿದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಬಿಜೆಪಿ ಅಧ್ಯಕ್ಷ ವೀರಣ್ಣ ಯಾರಿ ಅವರು ನಮ್ಮ ದೇಶದಲ್ಲಿ ಹೊಸ ಶಕೆ ಆರಂಭವಾಗಿದ್ದು ಸಂವಿಧಾನ ಜಾರಿಗೆ ಬಂದಾಗಿನಿಂದಲೇ, ಜಗತ್ತಿನಲ್ಲಿ ಇದರಿಂದ ನಮಗೆ ದೊಡ್ಡ ಬಲ ಬಂದಿದೆ.
ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರಿಗೆ ಗೌರವ ಸಲ್ಲಿಸುವದರ ಜತೆಗೆ ಅವರ ಸಾಧನೆಯ ಬಗ್ಗೆ ತಿಳಿಸಿ ಕೊಡುವುದು ಈ ದಿನದ ವಿಶೇಷತೆ ಎಂದು ನೆರೆದಿದ್ದ ಎಲ್ಲಾ ಕಾರ್ಯಕರ್ತರಿಗೆ ಸಂವಿಧಾನದ ಪೀಠಿಕೆಯನ್ನು ಬೋಧಿಸಿದರು.
ಈ ಸಂದರ್ಭದಲ್ಲಿ ಪ್ರಧಾನ ಕಾರ್ಯದರ್ಶಿ ರವಿ ನಾಯಕ, ಎಸ್ ಸಿ ಮೂರ್ಚಾ ಅಧ್ಯಕ್ಷ ದೌಲತರಾವ ಚಿತ್ತಾಪುರಕರ್, ಮುಖಂಡರಾದ ಗಿರಿಮಲ್ಲಪ್ಪ ಕಟ್ಟಿಮನಿ, ಅಶೋಕ ಪವಾರ, ರಿಚರ್ಡ್ ಮಾರೆಡ್ಡಿ,
ರವೀಂದ್ರ ನಾಯಕ, ಅಂಬದಾಸ ಜಾಧವ, ಮಲ್ಲಿಕಾರ್ಜುನ ಸಾತಖೇಡ, ನಾಗರಾಜ ಗೌಡ ಗೌಡಪ್ಪನೂರ, ನಿರ್ಮಲ ಇಂಡಿ, ಯಂಕಮ್ಮ ಗೌಡಗಾಂವ, ಬಾಬು ಗುತ್ತೆದಾರ ಸೇರಿದಂತೆ ಇತರರು ಪಾಲ್ಗೊಂಡಿದ್ದರು.
ವಿಕ್ರಮ ಓದುಗರ ವಾಟ್ಸಪ್ ಬಳಗಕ್ಕೆ ಸೇರಲು ಈ ಸಂಖ್ಯೆಯನ್ನು ನಿಮ್ಮ ಮೊಬೈಲ್ನಲ್ಲಿ ಸೇವ್ ಮಾಡಿಕೊಂಡು ನಮಗೊಂದು ಸಂದೇಶ ಕಳುಹಿಸಿ. ಮೊಬೈಲ್ ಸಂಖ್ಯೆ: 98800 21122
